ಶಬರಿಮಲೆ ಅಯ್ಯಪ್ಪ ದರ್ಶನ : ಹೆಣ್ಣು ಮಕ್ಕಳಿಗೂ ಅವಕಾಶ
ಕೇರಳದ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 10 ರಿಂದ 50 ವರ್ಷದೊಳಗಿನ ಮಹಿಳೆಯರ ಪ್ರವೇಶಕ್ಕೆ ಹೇರಲಾಗಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೆಗೆದುಹಾಕಿದೆ. ೮೦೦ ವರ್ಷಗಳ ಇತಿಹಾಸವಿರುವ ಶಬರಿಮಲೆ ದೇವಸ್ಥಾನಕ್ಕೆ ಹೆಣ್ಣು ಮಕ್ಕಳಿಗೆ ಈವರೆಗೆ ಪ್ರವೇಶವಿರಲಿಲ್ಲ. ಸುಪ್ರೀಂಕೋರ್ಟ್ ನೀಡಿರುವ ಈ ಆದೇಶ ಐತಿಹಾಸಿಕವಾಗಿದ್ದು, ಲಿಂಗ ಸಮಾನತೆಯನ್ನು ಎತ್ತಿಹಿಡಿದಿದೆ. ಯಾವುದೇ ದೇವಾಲಯದಲ್ಲಿ ಲಿಂಗಾಧರಿತ ತಾರತಮ್ಯಕ್ಕೆ ಅವಕಾಶ ಇಲ್ಲ, ಪುರುಷರ ಹಾಗೆಯೇ ಮಹಿಳೆಯರಿಗೂ ಪೂಜಿಸಲು ಅವಕಾಶವಿದೆ ಎಂದು ಕೋರ್ಟ್ ಹೇಳಿರುವುದು ದೇಶದ ಅಸಂಖ್ಯಾತ ಹೆಣ್ಣು ಮಕ್ಕಳು, ಮಹಿಳಾ ಹೋರಾಟಗಾರ್ತಿಯರು ಹಾಗೂ ಸಮಾನತೆಯ ಪ್ರತಿಪಾದಕರಲ್ಲಿ ಸಂತಸಕ್ಕೆ ಕಾರಣವಾಗಿದೆ.
ಹಿತೈಷಿಣಿ – ಮಹಿಳೆಯ ಅಸ್ಮಿತೆಯ ಅನ್ವೇಷಣೆಯಲ್ಲಿ ಗೆಳತಿ, ಸಮಾನತೆಯ ಸದಾಶಯದ ಸಂಗಾತಿ. ಮಹಿಳೆಯ ವಿಚಾರದಲ್ಲಿ ಹಿಂದಣ ಹೆಜ್ಜೆ, ಇಂದಿನ ನಡೆ, ಮುಂದಿನ ಗುರಿ ಇವುಗಳನ್ನು ಕುರಿತ ಚಿಂತನೆ, ಚರ್ಚೆಗಳನ್ನು ದಾಖಲಿಸುವುದು ಹಿತೈಷಿಣಿಯ ಕರ್ತವ್ಯ.